News Karnataka Kannada
Monday, April 29 2024
ಕ್ರೈಮ್

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್‌: 21 ಮಂದಿಯ ದುರಂತ ಸಾವು

21 killed as bus falls off flyover
Photo Credit : IANS

ರೋಮ್: ಇಟಾಲಿಯನ್ ನಗರದ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಬಸ್ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ.

ಸೇತುವೆಯ ಮೂಲಕ ವೆನಿಸ್‌ಗೆ ಸಂಪರ್ಕ ಕಲ್ಪಿಸುವ ಮೆಸ್ಟ್ರೆ ಜಿಲ್ಲೆಯ ರೈಲ್ವೆ ಹಳಿಗಳ ಬಳಿ ತಡೆಗೋಡೆ ಮುರಿದು ಬಸ್ ಪಲ್ಟಿಯಾಗಿದೆ. ದುರಂತದಲ್ಲಿ ಮೃತಪಟ್ಟವರ ಪೈಕಿ ಐವರು ಉಕ್ರೇನಿಯನ್ನರು, ಒಬ್ಬ ಜರ್ಮನ್ ಮತ್ತು ಇಟಾಲಿಯನ್ ಚಾಲಕ ಸೇರಿದ್ದಾರೆ.

ವೆನಿಸ್ ಮತ್ತು ಹತ್ತಿರದ ಮಾರ್ಗೇರಾ ಜಿಲ್ಲೆಯ ಕ್ಯಾಂಪ್‌ಸೈಟ್ ನಡುವೆ ಪ್ರವಾಸಿಗರನ್ನು ಬಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ರಾತ್ರಿ 7:45 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ದುರಂತಕ್ಕೆ ವೆನಿಸ್ ಮೇಯರ್ ಲುಯಿಗಿ ಬ್ರುಗ್ನಾರೊ ವಿಷಾದ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಕರ್ತರು ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕನಿಷ್ಠ 18 ಜನರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು