ಸಿಕ್ಕಿಂ: ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ.
ಇನ್ನು ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ. ಕೆಲವು ವಾಹನಗಳು ಕೆಸರಿನ ಅಡಿಯಲ್ಲಿ ಮುಳುಗಿವೆ ಎಂದು ಸೇನೆಯ ಪೂರ್ವ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.
ಸಿಂಘ್ಥಾಮ್ ಬಳಿಯ ಬರ್ದಂಗ್ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದೆ.