News Karnataka Kannada
Sunday, May 19 2024
ಕ್ರೈಮ್

ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ಶಿಶುಗಳು ಸೇರಿ 24 ಮಂದಿ ಮೃತ್ಯು

24 people, including 12 infants, die in 24 hours at govt hospital
Photo Credit : News Kannada

ಮುಂಬೈ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 24 ರೋಗಿಗಳು ಸಾವನ್ನಪ್ಪಿದ್ದು ಮೃತರಲ್ಲಿ 12 ನವಜಾತ ಶಿಶುಗಳೂ ಸೇರಿವೆ ಎಂದು ತಿಳಿದುಬಂದಿದೆ.

ಈ ಸಾವುಗಳಿಗೆ ಔಷಧಿ ಮತ್ತು ಸಿಬ್ಬಂದಿ ಕೊರತೆಯೇ ಕಾರಣ ಎಂದು ಆಸ್ಪತ್ರೆಯ ಡೀನ್ ಹೇಳಿದ್ದಾರೆ. ನಾಂದೇಡ್ನ ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. 12 ವಯಸ್ಕ ವ್ಯಕ್ತಿಗಳ ಸಾವಿನ ಕಾರಣಗಳು ವಿಭಿನ್ನವಾಗಿವೆ ಎಂದು ಡೀನ್ ಹೇಳಿದ್ದು ಇವರಲ್ಲಿ ಹಲವರು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಆರು ಪುರುಷರು ಮತ್ತು ಆರು ಹುಡುಗಿಯರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಡೀನ್ ಹೇಳಿದ್ದಾರೆ.

ಈ ಘಟನೆ ಬಗ್ಗೆ ಕಿಡಿಕಾರಿರುವ ಪ್ರತಿಪಕ್ಷಗಳು ಮೂರು ಇಂಜಿನ್ ಸರ್ಕಾರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಸಿಎಂ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು