ಭೋಪಾಲ್: ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್ನಿಂದ 26 ಹುಡುಗಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಭೋಪಾಲ್ನಲ್ಲಿ ನಡೆದಿದೆ.
ಘಟನೆಯ ಬಗ್ಗೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಭೋಪಾಲ್ನ ಪರ್ವಾಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಚಿಲ್ಡ್ರನ್ ಹೋಮ್ನಿಂದ 26 ಹುಡುಗಿಯರು ನಾಪತ್ತೆಯಾದ ಪ್ರಕರಣವು ನನ್ನ ಗಮನಕ್ಕೆ ಬಂದಿದೆ. ವಿಷಯದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಪರಿಗಣಿಸಿ, ಸರ್ಕಾರವು ಗಮನಹರಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಏತನ್ಮಧ್ಯೆ, ಭೋಪಾಲ್ನ ಪರ್ವಾಲಿಯಾ ಸಡಕ್ ಪೊಲೀಸ್ ಠಾಣೆಯು ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಮಕ್ಕಳ ರಕ್ಷಣೆ) ಕಾಯಿದೆ, 2015 ರ ಸೆಕ್ಷನ್ಗಳ ಅಡಿಯಲ್ಲಿ ಚಿಲ್ಡ್ರನ್ ಹೋಮ್ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಆರೋಪಿ ವ್ಯಕ್ತಿಯನ್ನು ಚಿಲ್ಡ್ರನ್ ಹೋಮ್ ವ್ಯವಸ್ಥಾಪಕ ಅನಿಲ್ ಮೆಥ್ಯೂ ಎಂದು ಹೆಸರಿಸಿದ್ದಾರೆ. ಚಿಲ್ಡ್ರನ್ ಹೋಮ್ ನಲ್ಲಿದ್ದ 68 ಬಾಲಕಿಯಲ್ಲಿ 26 ಮಂದಿ ಕಾಣೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.