News Karnataka Kannada
Monday, April 29 2024
ಕ್ರೈಮ್

ರಸ್ತೆ ಬದಿ ಹೂವು ಲೋಡ್‌ ಮಾಡುತ್ತಿದ್ದವರ ಮೇಲೆ ಹರಿದ ಟ್ರಕ್‌: 6 ಮಂದಿ ದಾರುಣ ಸಾವು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : IANS

ಕೋಲ್ಕತ್ತಾ: ರಸ್ತೆ ಬದಿ ಪಿಕ್‌ ಅಪ್‌ ವ್ಯಾನ್‌ ಗೆ ಹೂವುಗಳನ್ನು ಲೋಡ್‌ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಹರಿದು 6 ಮಂದಿ ಸಾವನ್ನಪ್ಪಿದ್ದು ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಖರಗ್‌ಪುರದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಖರಗ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬುರೊಮಾಲಾ ಪ್ರದೇಶದ ಮುಖ್ಯ ರಸ್ತೆಯಲ್ಲಿ ಪಿಕ್-ಅಪ್ ವ್ಯಾನ್‌ಗೆ ಹೂ ತುಂಬಿದ ಚೀಲಗಳನ್ನು ತುಂಬುತ್ತಿದ್ದಾಗ, ಇದ್ದಕ್ಕಿದ್ದಂತೆ ಸಿಮೆಂಟ್ ತುಂಬಿದ ಟ್ರಕ್ ಅವರ ಮೇಲೆ ಹರಿದಿದೆ. ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇತರ ಮೂವರು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಇತರ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಪೈಕಿ ಓರ್ವ ವ್ಯಕ್ತಿಯನ್ನು ಶಾಂತೋ ಭುಯಿ (44) ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು