Categories: ಕ್ರೈಮ್

ಕಾಬೂಲ್‌ ನಲ್ಲಿ ಮಿನಿಬಸ್‌ ಸ್ಫೋಟ 7 ಮಂದಿ ಸಾವು

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಿನಿ ಬಸ್‌ ಸ್ಫೋಟಗೊಂಡು 7 ನಾಗರಿಕರು ಮೃತಪಟ್ಟು ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ನಗರದ ಪಶ್ಚಿಮ ಭಾಗದಲ್ಲಿರುವ ದಷ್ಟಿ ಬಾರ್ಚಿ ಪ್ರದೇಶದಲ್ಲಿ ಒಂದು (ಮಂಗಳವಾರ) ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

ಯಾವ ಸಂಘಟನೆಯೂ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ, ಇಸ್ಲಾಮಿಕ್ ಸ್ಟೇಟ್ (ಐಎಸ್) ಸಂಘಟನೆಯು ಶಿಯಾ ಸಮುದಾಯದವನ್ನು ಗುರಿಯಾಗಿಸಿ ಶಾಲೆಗಳು, ಆಸ್ಪತ್ರೆ ಹಾಗೂ ಮಸೀದಿಗಳ ಮೇಲೆ ಇದೇ ಸ್ಥಳದಲ್ಲಿ ಈ ಹಿಂದೆ ದಾಳಿಗಳನ್ನು ಸಂಘಟಿಸಿತ್ತು.

ಅಫ್ಘಾನಿಸ್ತಾನ ಆಡಳಿತವನ್ನು 2021ರ ಆಗಸ್ಟ್‌ನಲ್ಲಿ ತಾಲಿಬಾನ್‌ ವಶಕ್ಕೆ ಪಡೆದ ಬಳಿಕ ಐಎಸ್‌ ಹಾಗೂ ಇತರ ಉಗ್ರ ಸಂಘಟನೆಗಳು ನಿರಂತರವಾಗಿ ಹಿಂಸಾ ಕೃತ್ಯಗಳನ್ನು ನಡೆಸುತ್ತಿವೆ.

Umesha HS

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

13 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

31 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

45 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

56 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago