News Karnataka Kannada
Monday, April 29 2024
ಕ್ರೈಮ್

ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ  ಅಂತ್ಯ

A fight between friends ended in a murder
Photo Credit : News Kannada

ಬೆಂಗಳೂರು: ಜಾತ್ರೆಯೊಂದರಲ್ಲಿ ಕನ್ನಡ, ತಮಿಳು ಹಾಡುಗಳನ್ನು ಹಾಕುವ  ವಿಚಾರವಾಗಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ  ಅಂತ್ಯವಾಗಿದೆ.

ಬೆಂಗಳೂರಿನ ಲಿಂಗರಾಜಪುರ ಜಾತ್ರೆಯಲ್ಲಿ ಡಿಜೆಯಲ್ಲಿ ಕನ್ನಡ ಮತ್ತು ತಮಿಳು ಹಾಡುಗಳ ಬಗ್ಗೆ  ಸ್ನೇಹಿತರಿಬ್ಬರೂ ಜಗಳವಾಡಿದ್ದಾರೆ.  ಹಳೇ ಬಾಗಲೂರು ಲೇಔಟ್ ನಿವಾಸಿ ಪ್ರವೀಣ್ ಎಂಬವರ ಮೇಲೆ ಅವರ ಸ್ನೇಹಿತ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ.

ದಾಳಿಯ ವೇಳೆ ಪ್ರವೀಣ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಪ್ರವೀಣ್ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಪ್ರವೀಣ್ ಈ ಹಿಂದೆಯೂ ಹಲವು ಬಾರಿ ತನ್ನ ಸ್ನೇಹಿತರ ಜತೆ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಂದರ್, ಆರ್ಮುಗಂ ಮತ್ತು ಪ್ರಭು ಅವರನ್ನು ಬಂಧಿಸಲಾಗಿದೆ ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಡಿ ದೇವರಾಜ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು