ನವದೆಹಲಿ: ಐದು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ನಕಲಿ ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರಿಗೆ ದೆಹಲಿ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ಸುಳ್ಳು ಪ್ರಕರಣ ದಾಖಲಿಸಿದ್ದ ವಿಚಾರಣೆ ನಡೆಸಿದ ಹೆಚ್ಚುವರಿ ನ್ಯಾಯಾಧೀಶ ಸುಶೀಲಾ ಬಾಲಾ ದಗಾರ್ ಈ ಆದೇಶ ಹೊರಡಿಸಿದ್ದಾರೆ.
ದಿನನಿತ್ಯದ ಜಗಳದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೋಪದಲ್ಲಿ ಸುಳ್ಳು ದೂರು ದಾಖಲಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಮಹಿಳೆ ಪೋಕ್ಸೊ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೋರ್ಟ್ ಹೇಳಿದೆ.