ಕಾರ್ಕಳ: ಮಾಳ ಘಾಟ್ ನಲ್ಲಿ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ.