ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ ಶನಿವಾರ ನಡೆದಿದೆ. ಪರಾರಿಯಾದ ಆರೋಪಿಯನ್ನು 23 ವರ್ಷದ ವಸಂತ್ ಎಂದು ಗುರುತಿಸಲಾಗಿದೆ. ಈತ ಕಾರಾಗೃಹದ ಗೋಡೆಯನ್ನು ಹಾರಿ ಎಸ್ಕೇಪ್ ಆಗಿದ್ದಾನೆ. ಪರಾರಿಯಾಗಿರುವ ವಸಂತ್ ದಾವಣಗೆರೆ ನಗರದ ಹೊರವಲಯದ ಕೂರರ್ ಪ್ರದೇಶದ ನಿವಾಸಿಯಾಗಿದ್ದಾನೆ.
ಈ ಆಟೋ ಚಾಲಕನಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತನ ವಿರುದ್ಧ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.
ನಾಪತ್ತೆಯಾದ ಸ್ವಲ್ಪ ಸಮಯದ ಬಳಿಕ ಜೈಲಿನ ಸಿಬ್ಬಂದಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸಿಬ್ಬಂದಿ ಬಸವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ