ಕೌಶಾಂಭಿ: ಕ್ಷುಲ್ಲಕ ಕಾರಣವೊಂದಕ್ಕೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮೇಲೆ ಹಲ್ಲೆ ನಡೆಸಿ ಆತನ ಗುಪ್ತಾಂಗವನ್ನು ಚಾಕುವಿನಿಂದ ಕತ್ತರಿಸಿದ್ದಾರೆ.
ಕೌಶಂಬಿ ಜಿಲ್ಲೆಯ ಮಂಜನ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತ್ರಸ್ತನನ್ನು ನೆರೆಹೊರೆಯವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.