News Karnataka Kannada
Thursday, May 02 2024
ಕ್ರೈಮ್

ಮತ್ತೆ ಅಂಬರ್‌ ಗ್ರೀಸ್‌ ಪ್ರಕರಣ ಪತ್ತೆ: ಇದೀಗ 1.62 ಕೋಟಿ ರೂ. ಮೌಲ್ಯದ ವಸ್ತು ವಶ

Ambergis case detected again: Rs 1.62 crore recovered Valuables seized
Photo Credit : News Kannada

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು

ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ವೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.

ನ.25 ರಂದು ಮಂಗಳೂರು ನಗರದ ಪಂಪೈಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,5750,000/- ರೂ ಮೌಲ್ಯದ 1575 ಕಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್, ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು