News Karnataka Kannada
Monday, April 29 2024
ಕ್ರೈಮ್

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

Ammonia gas leak at factory, several fall ill
Photo Credit : News Kannada

ತಮಿಳುನಾಡು:  ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ.

ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.

ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಸ್ಥಳೀಯ ನಿವಾಸಿಗಳು ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚುವಂತೆ ಮತ್ತು ಮಾಸ್ಕ್ ಧರಿಸಿ ಮತ್ತು ನೀರಿನಲ್ಲಿ ಅದ್ದಿದ ಕರವಸ್ತ್ರಗಳೊಂದಿಗೆ ಮನೆಗಳಿಂದ ಹೊರ ಬರುವಂತೆ ಮನವಿ ಮಾಡಲಾಗಿದೆ.

ಸ್ಥಳದಲ್ಲಿ ಇದೀಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿ.ವಿಜಯಕುಮಾರ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು