ಕ್ರೈಮ್

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸೆಗಿದ ಕಾಮುಕ ಸಬ್ ಇನ್ಸ್‌ಪೆಕ್ಟರ್

ನವದೆಹಲಿ: ಎಳೆಯ ಮಕ್ಕಳ ಮೇಲೆ ಕಾಮುಕರು ಕಣ್ಣು ಹಾಕುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿದೆ. ಅದೇ ರೀತಿ 4 ವರ್ಷದ ಬಾಲಕಿಯ ಮೇಲೆ ಶುಕ್ರವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ದೌಸಾ ಜಿಲ್ಲೆಯ ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ 4 ವರ್ಷದ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಈ ಬಗ್ಗೆ ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಭಾರೀ ಸಂಖ್ಯೆಯಲ್ಲಿ ರಾಹುವಾಸ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅತ್ಯಾಚಾರ ನಡೆಸಿದ ಸಬ್ ಇನ್​ಸ್ಪೆಕ್ಟರ್ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಆ ಜನರು ಆರೋಪಿಯನ್ನು ಥಳಿಸಿದ್ದಾರೆ.

Umesha HS

Recent Posts

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಐವರಿಗೆ ಚಾಕು ಇರಿದು ಆರೋಪಿ ಪರಾರಿ

ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.

14 mins ago

12.5 ಲಕ್ಷ ರೂ. ದೇವಸ್ಥಾನಕ್ಕೆ ದೇಣಿಗೆ ನೀಡಿದ ಟಾಲಿವುಡ್ ನಟ ಜ್ಯೂ.ಎನ್‌ಟಿಆರ್

ಟಾಲಿವುಡ್ ನಟ ಜ್ಯೂ.ಎನ್‌ಟಿಆರ್ ಮೇ 20ರಂದು 41ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದು, ಈ ಹಿನ್ನೆಲೆ ಆಂಧ್ರಪ್ರದೇಶದ ದೇವಸ್ಥಾನವೊಂದಕ್ಕೆ ಜ್ಯೂ.ಎನ್‌ಟಿಆರ್ 12.5…

28 mins ago

ತೆಲಂಗಾಣದಲ್ಲಿ 10 ದಿನ ಸಿಂಗಲ್ ಸ್ಕ್ರೀನ್ ಥಿಯೇಟರ್‌ ಬಂದ್‌

10 ದಿನಗಳ ಕಾಲ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ತೆಲಂಗಾಣದಲ್ಲಿ ಘೋಷಣೆ ಮಾಡಲಾಗಿದೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ…

47 mins ago

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣಗೆ ಮಧ್ಯಂತರ ಜಾಮೀನು

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

1 hour ago

ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಬರ್ಬರ ಕೊಲೆ

ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ.

1 hour ago

ಫಾದರ್ ಮುಲ್ಲರ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ

ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ (ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಒಂದು ಘಟಕ ) ನ ಪ್ರಸೂತಿ ಮತ್ತು…

1 hour ago