ಬೆಳಗಾವಿ: ದೀಪಾವಳಿ ಹಬ್ಬದಂದು ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಕುಕೃತ್ಯವನ್ನು ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಪ್ರವೀಣ್ ಅರುಣ್ ಚೌಗಲೇಯೇ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯಾಗಿದ್ದು, ಕೃತ್ಯ ನಡೆಸಿದ ಬಳಿಕ ಕುಡುಚಿ ಪಟ್ಟಣದ ಸಂಬಂಧಿಯ ಮನೆಯಲ್ಲಿ ಅವಿತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಗಳೂರು ಏರ್ಪೋರ್ಟ್ ನಲ್ಲಿ ಸಿಆರ್ಪಿಎಫ್ ಸಿಬ್ಬಂದಿಯಾಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಇದೀಗ ಪೊಲೀಸರು ಉಡುಪಿಗೆ ಕರೆತರುತ್ತಿದ್ದಾರೆ.
ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಸುತ್ತುತ್ತಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ.