ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ ಭಾರತದ ಮೋಸ್ಟ್ ವಾಂಟೆಡ್ ಉಗ್ರನ ಎರಡನೇ ಹತ್ಯೆ ಇದಾಗಿದೆ.
ಬಜೌರ್ ಜಿಲ್ಲೆಯಲ್ಲಿ ಬೈಕ್ನಲ್ಲಿ ಬಂದ ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ 2018-2020 ರ ಅವಧಿಯಲ್ಲಿ ಲಷ್ಕರ್ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ. ಭಾರತದ ವಿರುದ್ಧ ದ್ವೇಷ ತುಂಬಿದ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.