News Karnataka Kannada
Sunday, May 05 2024
ಕ್ರೈಮ್

ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು

ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ  ಮೃತಪಟ್ಟಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತದ ದೂತಾವಾಸ  ತಿಳಿಸಿದೆ.
Photo Credit : News Kannada

ಬೇಲೂರು: ಕಾಡಾನೆ ದಾಳಿಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ನಡೆದಿತ್ತು. ಇದೀಗ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಕಾರ್ಮಿಕರೋರ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಅಂಕಿಹಳ್ಳಿ ಸಮೀಪ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕ ದೀಪಕ್ ರಾಯ್ (54) ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ವ್ಯಕ್ತಿ.

ಗಾರೆ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ದೀಪಕ್ ರಾಯ್ ಕೆಲಸ ಮುಗಿಸಿ ದಿನಸಿ ವಸ್ತುಗಳನ್ನು ಖರೀದಿಸಲು ಅಂಗಡಿಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿತ್ತು. ದಾಳಿಯ ನಂತರ ಜೊತೆಗಿದ್ದವರ ನೆರವಿನಿಂದ ಚಿಕಿತ್ಸೆಗಾಗಿ ಸಕಲೇಶಪುರ ಕ್ರಾಪರ್ಡ್ ಆಸ್ಪತ್ರೆಗೆ ಕರೆತರಲಾಗಿತ್ತು. ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡುವ ಮೊದಲೇ ಕಾರ್ಮಿಕ ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು