News Karnataka Kannada
Monday, April 29 2024
ಕ್ರೈಮ್

ಉಗ್ರರೊಂದಿಗೆ ಹೋರಾಟದಲ್ಲಿ ಸೇನಾಧಿಕಾರಿ ಹುತಾತ್ಮ

Army officer martyred in encounter with terrorists
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಉಗ್ರರು ಮತ್ತು ಸೇನಾ ಪಡೆ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಅಧಿಕಾರಿ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.

ಅರಣ್ಯದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ವೇಳೆ ಎನ್‌ ಕೌಂಟರ್‌ ನಡೆದಿದ್ದು, ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ದಟ್ಟಾರಣ್ಯಗಳನ್ನು ಭಯೋತ್ಪಾದಕರು ಅಡಗುತಾಣವಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಪ್ರದೇಶದ ಪರ್ವತಗಳು, ದಟ್ಟವಾದ ಕಾಡುಗಳಲ್ಲಿ ಅಡಗಿ ಸಂಚು ರೂಪಿಸುತ್ತಿದ್ದಾರೆ. ಕಳೆದ ವಾರ, ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಕೊಲ್ಲಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು