News Karnataka Kannada
Saturday, May 18 2024
ಕ್ರೈಮ್

ಬಾವಿಗೆ ಬಿದ್ದು ಆಟೋ ಟೆಂಪೊ ಚಾಲಕ ಆತ್ಮಹತ್ಯೆ

Auto tempo driver commits suicide by falling into well
Photo Credit : News Kannada

ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.

ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು