News Karnataka Kannada
Friday, May 03 2024
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತ

Bantwal: Rickshaw driver killed after being hit by car
Photo Credit : By Author

ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ(45) ಮೃತಪಟ್ಟ ದುರ್ದೈವಿ. ವಿನಾಯಕ ಪೈ ಅವರ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ಹೊತ್ತಿನ ಉಪಹಾರ ತರಲೆಂದು ಅವರು ವಗ್ಗದ ಹೊಟೇಲ್ ಒಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು