ಬೀದರ್: ರಾತ್ರಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಯುವಕನೊಬ್ಬನ ಬೈಕ್ ಅನ್ನು ಅಡ್ಡಗಟ್ಟಿ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ಘಟನೆ ನಡೆದಿದೆ.
ಬೀದರ್ನ ವಿಳಾಸಪುರದ ನಿವಾಸಿಯಾಗಿರುವ ಯುವಕ ಅಮಿತ್ ಮಾನಜಿ (35) ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ರಾತ್ರಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಮಾರು 9:30 ಗಂಟೆಗೆ ಬೈಕ್ ಅಡ್ಡಗಟ್ಟಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಈ ವೇಳೆ ಮೃತ ಕುಟುಂಬನ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ.
ಬೀದರನಲ್ಲಿ ಯುವಕನನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.