ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಆದರೆ ಈಗ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ.
ಸೋಮವಾರ (ಡಿ.11)ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.