ಬೆಂಗಳೂರು: ನಿನ್ನೆಯಷ್ಟೆ ರಾಜಸ್ಥಾನದಲ್ಲಿ ವಿದ್ಯಾರ್ಥಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿತ್ತು.
ಇದೀಗ ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಐಐಎಸ್ಸಿ ಕ್ಯಾಂಪಸ್ನ ಕಟ್ಟಡದಿಂದ ಜಿಗಿದು ಇಂದು(ಡಿ.01) ಬೆಳಗಿನ ಜಾವ 7:10ರ ಸಂಧರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
2022ರ ಬ್ಯಾಚ್ನ ಡೈಮಂಡ್ ಖುಷ್ವಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇನ್ನು ಕೆಮಿಕಲ್ ಸೈನ್ಸ್ ವಿಭಾಗದಲ್ಲಿ ಸಂಶೋಧನೆ ಮಾಡುತ್ತಿದ್ದರು. ಖುಷ್ವಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821