ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜು ವಿದ್ಯಾರ್ಥಿ ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪುಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ, ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ ಸಿಸಿ ಹೊರಡಿಸಲಿದೆ.
ಬಿಗ್ ಬ್ರೇಕಿಂಗ್: ಸೌಜನ್ಯ ಕೊಲೆ ಪ್ರಕರಣ ಸಿಬಿಐನಿಂದ ಮರುತನಿಖೆಗೆ ಹೈಕೋರ್ಟ್ ಗೆ ಮೇಲ್ಮನವಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.