News Karnataka Kannada
Monday, April 29 2024
ಕ್ರೈಮ್

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕಗ್ಗೊಲೆ

ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾದನಹಿಪ್ಪರಗಾ ಪೊಲೀಸ್ ಠಾಣೆಯ ವ್ಯಾಪ್ತಿಯ ಸ್ವಗ್ರಾಮ ಸರಸಂಬಾದಲ್ಲಿಯೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಚುಚ್ಚಿ, ಕೊಚ್ಚಿ ಕಗ್ಗೊಲೆ ಮಾಡಿದ್ದಾರೆ.
Photo Credit : News Kannada

ಕಲಬುರಗಿ: ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾದನಹಿಪ್ಪರಗಾ ಪೊಲೀಸ್ ಠಾಣೆಯ ವ್ಯಾಪ್ತಿಯ ಸ್ವಗ್ರಾಮ ಸರಸಂಬಾದಲ್ಲಿಯೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಚುಚ್ಚಿ, ಕೊಚ್ಚಿ ಕಗ್ಗೊಲೆ ಮಾಡಿದ್ದಾರೆ.

ಕೊಲೆಯಾದ ಮಹಾಂತಪ್ಪ ಹೊಲಕ್ಕೆ ಹೋದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಠಾತ್‌ ದಾಳಿ ನಡೆಸಿ, ಕೊಲೆಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಗೊಳಿಸಿದೆ.

ರಾಡ್‌ನಿಂದ ಕೈಗೊಂಡ ದುಷ್ಕರ್ಮಿಗಳ ದಾಳಿಗೆ ತೀವ್ರಗಾಯಗೊಂಡಿದ್ದ ಆಲೂರೆ ಅವರನ್ನು ಆಳಂದನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಸೋಲ್ಲಾಪೂರದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ಹೇಳಲಾಗುತ್ತಿದೆ. ಮಾದನಹಿಪ್ಪರಗಾ ಠಾಣೆಯ ಪಿಎಸ್‍ಐ ವೀರೇಶ ಅವರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ, ಹೆಚ್ಚುವರಿ ಎಸ್ಪಿ ಶ್ರೀನಿಧಿ, ಡಿವೈಎಸ್‍ಪಿ ಮಹ್ಮದ್ ಶರೀಫ್, ಸಿಪಿಐ ಚನ್ನಯ್ಯಾ ಹಿರೇಮಠ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದಾರೆ.

ಘಟಕನೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣವನ್ನು ಭೇದಿಸಲು ಎಲ್ಲ ಮಗ್ಗಲುಗಳಿಂದ ಜಾಲವನ್ನು ಬಿಸಿ ತನಿಖೆ ಆರಂಭಿಸಿದ್ದಾರೆ. ಮೃತರಿಗೆ ಪತ್ನಿ ಸೇರಿ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ತಂದೆ ತಾಯಿ ಸೇರಿ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸರಸಂಬಾ ಗ್ರಾಮದ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಸಹಕಾರಿ ಧುರೀಣ ಆಲೂರೆ ಅವರು ನಾಲ್ಕು ಬಾರಿ ಸರಸಂಬಾ ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ವರ್ಷಗಳಿಂದ ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರ ಪ್ರಬಲ ಬೆಂಬಲಿಗರಾಗಿದ್ದ ಆಲೂರೆ ಅವರ ಕೊಲೆನಡೆದ ಘಟನೆಯ ಸುದ್ದಿ ಹರಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗತೊಡಗಿದೆ. ಅಲ್ಲದೆ ಕುಟುಂಬಸ್ಥರ ಹಾಗೂ ಬಂಧು ಬಾಂಧವರ ರೋಧನೆ ಮುಗಿಲು ಮುಟ್ಟಿದೆ.

ಆಲೂರೆ ಅವರು ಮುಂಬರುವ ಜಿಪಂ ಚುನಾವಣೆಯ ಸ್ಫರ್ಧಾ ಆಕಾಂಕ್ಸಿಯಾಗಿದ್ದುಕೊಂಡು ಸಿದ್ಧತೆಯಲ್ಲಿ ತೊಡಗಿ ರಾಜಕೀಯದಲ್ಲಿ ಸಕ್ರಿಯವಾಗಿ ತಮ್ಮನ್ನೇ ತಾವು ತೊಡಗಿಸಿಕೊಂಡಿದ್ದರಲ್ಲದೆ, ಶ್ರೀ ಧನಲಕ್ಷ್ಮೀ ಸೌಹಾರ್ದ ಪತ್ತಿನ ಸಹಕಾರ ಸಂಘದ ವಿವಿಧ ಗ್ರಾಮಗಳಲ್ಲಿ ಐದು ಶಾಖೆಗಳು ತೆರೆದು ರೈತ ಸಮುದಾಯದಲ್ಲಿ ಸಹಕಾರಿ ಧುರೀಣರಾಗಿ ಮೆಚ್ಚಿಗೆ ಪಡೆದಿದ್ದು ಅಷ್ಟೇ ಅಲ್ಲದೆ ಸಹಕಾರ ಸಂಘದ ಮೂಲಕ ಅನೇಕ ಜನಪರ ಕಾರ್ಯಗಳು ಸಹ ಅವರು ಅನುಷ್ಠಾನಕ್ಕೆ ತರುವಲ್ಲಿ ಶ್ರಮಿಸಿದ ವ್ಯಕ್ತಿಯನ್ನು ಕೊಲೆಗಿಡಾಗಿದ್ದರಿಂದ ಅಭಿಮಾನಿಗಳು ಕಂಬನಿಮಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು