News Karnataka Kannada
Monday, May 06 2024
ಕ್ರೈಮ್

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು: 5 ಲಕ್ಷ ರೂ. ಮೌಲ್ಯದ ಬಂಗಾರ ಕದ್ದು ಪರಾರಿ

Burglars break into house in broad daylight: cash Steal gold worth Rs 5 lakh
Photo Credit : News Kannada

ಬಂಟ್ವಾಳ: ಕಂದೂರಿನ ದೇವಮಾತ ಕಾಂಪ್ಲೆಕ್ಸ್ ನಲ್ಲಿ ರೋಶನ್ ಡಿಸೋಜ ಎಂಬುವವರ ಮನೆಗೆ ಕಳ್ಳರು ಬಾಗಿಲು ಒಡೆದು ನುಗ್ಗಿ ಹಾಡುಹಗಲೇ ಸುಮಾರು 5 ಲಕ್ಷ ರೂಪಾಯಿಯ ಚಿನ್ನ ಮತ್ತು ಬೆಳ್ಳಿಯನ್ನು ಕದ್ದು ಪರಾರಿಯಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಂದೂರಿನಲ್ಲಿ ನಡೆದಿದೆ.

ಸುಮಾರು 13 ವರ್ಷಗಳಿಂದ ರೋಶನ್ ಡಿಸೋಜ ಅವರು ಬಾಡಿಗೆ ಮನೆಯಲ್ಲಿ ವಾಸವಿದ್ದು ಇಂದು ಬೆಳ್ಳಗ್ಗೆ ರೋಶನ್ ಮತ್ತು ಅವರ ಪತ್ನಿ ಕೆಲಸಕ್ಕೆ ಹಾಗೂ ಮಗಳು ಕಾಲೇಜಿಗೆ ಹೋಗಿದ್ದರು ಮನೆಯಲ್ಲಿ‌ ಯಾರು ಇರದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ. ಇನ್ನು ಗೊತ್ತಿರುವವರೇ ಈ ಕೃತ್ಯ ನಡೆಸಿದ್ದಾರೆ ಎಂದು ಮನೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ. ಇದೀಗ ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಸಜೀಪಮೂಡ ಗ್ರಾಮದ ಮಿತ್ತಮಜಲು ಪ್ರದೇಶದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ ಓರ್ವ ಮನೆ ಮುಂದೆ ಅನುಮಾನಾಸ್ಪದವಾಗಿ ತಿರುಗಾಡಿತ್ತಿದ್ದು ಸ್ಥಳೀಯರು ಯಾರೇಂದು ಪ್ರಶ್ನಿಸಿದ್ದಾಗ ಅಲ್ಲಿಂದ ಪರಾರಿಯಾದ ಘಟನೆ ಕೂಡ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು