ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಸಿಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.