ಕ್ರೈಮ್

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೆರೆ ಹಿಡಿದ ಸಿಸಿಬಿ

ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31) ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್(26) ಬಂಧಿತರು.

ಬಂಧಿತರಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 600 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

ಇನ್ನು ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Ashika S

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

6 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

8 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

17 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

32 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

45 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

48 mins ago