News Karnataka Kannada
Friday, May 10 2024
ಕ್ರೈಮ್

ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ: ಸ್ಫೋಟಕ ತಿರುವು

Talks completed from Delhi: Chaitra's another video goes viral
Photo Credit : News Kannada

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೆಂಗಳೂರಿನ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್ ಸತ್ಯ ಬಾಯ್ಬಿಟ್ಟಿದೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್​ ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ.

ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್​​ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈವರೆಗೂ 8 ಆರೋಪಿಗಳು ಲಾಕ್ ಆಗಿದ್ದು ಎಲ್ಲರ ಮೊಬೈಲ್ ವಶಕ್ಕೆ ಪಡೆದಿರೋ ಸಿಸಿಬಿ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ಕಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು