ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ಹೊಸ ವರ್ಷದಂದು ದಲಿತ ಯುವಕನ ಮೇಲೆ ಹಲ್ಲೆ ನಡೆದಿದೆ.
ದಲಿತ ಯುವಕ ಮಾರುತಿ ಗೊಲ್ಲರ ಬೀದಿಗೆ ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದ. ಮಾರುತಿ ದಲಿತ ಯುವಕ ಎಂದು ತಿಳಿಯುತ್ತಿದ್ದಂತೆ ಗೊಲ್ಲರ ಬೀದಿ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕನಿಗೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ಖಂಡಿಸಿ ಇಂದು ಗೊಲ್ಲರ ಬೀದಿಗೆ ತೆರಳಿ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಸಿದ್ಧತೆ ನಡೆಸಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.