News Karnataka Kannada
Saturday, April 27 2024
ಕ್ರೈಮ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಜೈಲು

Cricketer Sandeep Lamichhane jailed for raping minor girl
Photo Credit : News Kannada

ದೆಹಲಿ: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ  ಸಂದೀಪ್ ಲಮಿಚಾನೆ  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ.

ಶುಕ್ರವಾರ  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್ ಲಮಿಚಾನೆ ದೋಷಿ ಎಂದು ತೀರ್ಪು ನೀಡಿದೆ.

ಆಗಸ್ಟ್ 21 ರಂದು ಕಠ್ಮಂಡು ಜಿಲ್ಲಾ ನ್ಯಾಯಾಲಯದ ವಕೀಲರು 17 ವರ್ಷದ ಬಾಲಕಿಯ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಸಂದೀಪ್ ವಿರುದ್ಧ ಆರೋಪ ಹೊರಿಸಲಾಗಿದೆ.

ಸಂದೀಪ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ್ದರು. ಈ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪ್ರತಿನಿಧಿಸಲಿದ್ದರು. ನೇಪಾಳ ಪೊಲೀಸರು ಅವರನ್ನು ಅಕ್ಟೋಬರ್ 6 ರಂದು ಬಂಧಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೀಪ್ ವಿರುದ್ಧ 6 ಸೆಪ್ಟೆಂಬರ್ 2022 ರಂದು ಗೌಶಾಲ್ ಮೆಟ್ರೋಪಾಲಿಟನ್ ಪೊಲೀಸ್ ವೃತ್ತದಲ್ಲಿ ಪ್ರಕರಣ ದಾಖಲಿಸಿದ್ದಳು.

ಈ ಪ್ರಕರಣದಲ್ಲಿ ಸಂದೀಪ್‌ಗೆ ಎಷ್ಟು ವರ್ಷ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಧೀಶರು ಬಹಿರಂಗಪಡಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು