ಚಿಕ್ಕಮಗಳೂರು: ಚಿಕ್ಕಗಳೂರಿನಲ್ಲಿ ಶುಕ್ರವಾರ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.
ಇದೀಗ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗುರುವಾರ ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.