Categories: ಕ್ರೈಮ್

ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು: ಆನೇಕಲ್ ನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304 ಅಡಿ ಎಫ್​ಐಆರ್​​ ದಾಖಲಾಗಿದೆ.

ಶನಿವಾರ ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಪಟಾಕಿ ಇಳಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಗೋದಾಮಿನ ನಿರ್ಲಕ್ಷ್ಯದಿಂದ ಅಂತ ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಇನ್ನು ಗೋದಾಮು ಮಾಲೀಕನ ಪುತ್ರ ನವೀನ್​ನ್ನು ವಶಕ್ಕೆ ಪಡೆದಿದ್ದೇವೆ. ಘಟನೆಯಲ್ಲಿ ನವೀನ್​ಗೂ ಗಾಯಗಳಾಗಿವೆ, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದರು.

Ashika S

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

13 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

15 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

35 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

47 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

57 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago