ಕೊಚ್ಚಿ: ಕೇರಳದ ಕಲಮಸ್ಸೆರಿಯ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಸ್ಫೋಟದ ಶಂಕಿತ ಆರೋಪಿ ಡೊಮಿನಿಕ್ ಮಾರ್ಟಿನ್(48 ) ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆ ಕಲಿತಿದ್ದು, ಬಾಂಬ್ ತಯಾರಿಸಲು 3ಸಾವಿರ ಖರ್ಚು ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ.
ಮಾರ್ಟಿನ್ ಕುಟುಂಬವು ಕೊಚ್ಚಿ ಬಳಿ ಕಳೆದ ಐದು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ಎಲೆಕ್ಟ್ರಿಕ್ ಸರ್ಕ್ಯೂಟ್ನಲ್ಲಿ ಪರಿಣಿತ ಎಂದು ಹೇಳಲಾದ ಮಾರ್ಟಿನ್ ದುಬೈನಲ್ಲಿ ಫೋರ್ಮ್ಯಾನ್ ಆಗಿ ಹಲವು ವರ್ಷ ಕೆಲಸ ಮಾಡಿದ್ದು, ಎಲೆಕ್ಟ್ರಾನಿಕ್ ಸಾಧನವನ್ನು ಜೋಡಿಸಲು ಕಲಿಕೊಂಡಿದ್ದ. 2ತಿಂಗಳ ಹಿಂದೆ ದುಬೈನಿಂದ ವಾಪಸ್ಸಾಗಿದ್ದು, ಸ್ಫೋಟ ನಡೆಸಿದ್ದಾನೆ. ಪ್ರಾಥಮಿಕ ತನಿಖೆಯ ಪಟಾಕಿಗಳಲ್ಲಿ ಬಳಸುವ ಕಡಿಮೆ ದರ್ಜೆಯ ಸ್ಫೋಟಕಗಳಿಂದ ಬಾಂಬ್ ತಯಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಮತ್ತು 12 ವರ್ಷದ ಬಾಲಕಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.