News Karnataka Kannada
Saturday, April 20 2024
Cricket
ಕ್ರೈಮ್

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ

Driver seriously injured in head-on collision between two lorries
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್‌ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ.

ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ. ಅಪಘಾತವಾದ ಎರಡು ಲಾರಿಗಳನ್ನು ರಸ್ತೆಯಿಂದ ತೆರವುಗೊಳಿಸಿ ಬೇರೆ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿ ಕೊಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು