Categories: ಕ್ರೈಮ್

ಹಾಸನಾಂಬೆ ದೇವಸ್ಥಾನದಲ್ಲಿ ಭಕ್ತರಿಗೆ ವಿದ್ಯುತ್​ ಶಾಕ್

ಹಾಸನ: ಹಾಸನಾಂಬೆ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆಯಲು ಸಂತೇಪೇಟೆಯ ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದಾಗ ಕೆಲವು ಭಕ್ತರಿಗೆ ವಿದ್ಯುತ್​ ಶಾಕ್ ಹೊಡೆದ ಘಟನೆ ನಡೆದಿದೆ.

ಇದರಿಂದ ಭಯಭೀತರಾದ ಭಕ್ತರು ಸ್ಥಳದಿಂದ ಓಡಿದ್ದು, ಅಲ್ಲಿ ನೂಕುನುಗ್ಗಲು ಉಂಟಾಗಿದೆ. ನೂಕುನುಗ್ಗಲು ವೇಳೆ ಮಹಿಳೆಯರು, ಯುವತಿಯರು ನೆಲಕ್ಕೆ ಬಿದ್ದಿದ್ದು, ಹಲವರಿಗೆ ಗಾಯಗಳಾಗಿವೆ. ಸದ್ಯ ಗಯಾಗೊಂಡ ಭಕ್ತರನ್ನು ಹಾಸನ ಆಸ್ಪತ್ರೆಗೆ ದಾಖಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಭಕ್ತರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸಾರ್ವಜನಿಕರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಕೇವಲ ರಾಜಕಾರಣಗಳಿಗೆ, ಸಿನಿಮಾದವರಿಗೆ, ದೊಡ್ಡ-ದೊಡ್ಡ ವ್ಯಕ್ತಿಗಳಿಗೆ ಮಾತ್ರ ಸಕಲ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜಕನಿಕರು ಅಮ್ಮನ ದರ್ಶನ ಮಾಡುವುದಕ್ಕೆ ಇಕ್ಕಟ್ಟಿನಲ್ಲೇ ಹೋಗಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.

Ashika S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

8 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

17 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

17 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

32 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

38 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

50 mins ago