ಬಳ್ಳಾರಿ: ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ರುಂಡ – ಮುಂಡ ಬೇರ್ಪಟ್ಟ ಘಟನೆ ಬಳ್ಳಾರಿ ತಾಲೂಕು ದಮ್ಮೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಭದ್ರ ಎಂದು ಗುರುತಿಸಲಾಗಿದೆ. ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಖಾಸಗಿಯಾಗಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದ ಭದ್ರ ಎಂಬವರು ಕರೆಂಟ್ ಇಲ್ಲ ಎಂದು ಭಾವಿಸಿ ಕಂಬ ಏರಿದ್ದ ವೇಳೆ ಈ ಘಟನೆ ನಡೆದಿದೆ.