News Karnataka Kannada
Monday, April 22 2024
Cricket
ಕ್ರೈಮ್

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಯೋಧ ಸಾವು

Ex-serviceman killed in road accident on Mysuru-Bengaluru highway
Photo Credit : News Kannada

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀರಂಗಪಟ್ಟಣ ತಾ| ನಗುವನಹಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಾರು ಹೊತ್ತಿ ಉರಿದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಎಸ್​​ಯುವಿ ಮಹೇಂದ್ರ ಕಾರಿನಲ್ಲಿ ಅನೇಕಲ್ ಮೂಲದ ಐವರು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಕಾರು ಪಲ್ಟಿಯಾಗ್ತಿದ್ದಂತೆ ಕೆಳಗೆ ಬಿದ್ದು ನಿವೃತ್ತ ಯೋಧ ಸಾವನ್ನಪ್ಪಿದ್ದಾರೆ. ಕಿಶೋರ್ ಬಾಬು (47) ಸ್ಥಳದಲ್ಲೇ ಸಾವನ್ನಪ್ಪಿರುವ ನಿವೃತ್ತ ಯೋಧ.

ಕಾರಿನಲ್ಲಿ ಉಳಿದ ನಾಲ್ವರ‌ನ್ನು ಪೊಲೀಸರು, ಸಾರ್ವಜನಿಕರು ರಕ್ಷಣೆ ಮಾಡಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು