ಬೀದರ್: ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದ್ದು ಜಮೀನು ವಿಚಾರಕ್ಕೆ ಶುರುವಾದ ಈ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಕುಸಿದು ಬಿದ್ದಿದ್ದಾರೆ. ತತಕ್ಷಣವೇ ಮನ್ನಾಖೇಳಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ.
ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.