News Karnataka Kannada
Thursday, May 02 2024
ಕ್ರೈಮ್

ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

Complaint lodged against teacher for assaulting students naked
Photo Credit : News Kannada

ಕೋಲ್ಕತ್ತಾ: ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಗುರುವಾರ 12 ಬಿಜೆಪಿ ಶಾಸಕರ ವಿರುದ್ಧ ಹರೆ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಶಾಸಕರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸುವೇಂದು ಅಧಿಕಾರಿ ಮತ್ತು ಸದನದಲ್ಲಿ ಪಕ್ಷದ ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದ್ದಾರೆ.

ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಬಾಕಿ ಹಣ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ ಶಾಸಕರು ಕಪ್ಪು ಬಟ್ಟೆ ಧರಿಸಿ ವಿಧಾನಸಭೆ ಆವರಣದಲ್ಲಿನ ಬಿಆರ್‌ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗೊಂದಲ ಆರಂಭವಾಯಿತು.

ಪ್ರತಿಭಟನೆ ಮುಕ್ತಾಯದ ವೇಳೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಪಕ್ಷದ ಮೆಗಾ ರ‍್ಯಾಲಿಗೆ ತೆರಳಲು ವಿಪಕ್ಷ ನಾಯಕನ ನೇತೃತ್ವದ ಬಿಜೆಪಿ ಶಾಸಕರ ಗುಂಪು ವಿಧಾನಸಭೆ ಆವರಣಕ್ಕೆ ಆಗಮಿಸಿತು.

ವಿಪಕ್ಷ ನಾಯಕ ಸೇರಿದಂತೆ ಶಾಸಕರು ಪ್ರತಿಭಟನಾನಿರತರಾಗಿದ್ದವರ ನೋಡಿ ‘ಕಳ್ಳರು, ಕಳ್ಳರು’ ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂದಿತು.

ಆಡಳಿತ ಪಕ್ಷದ ಶಾಸಕರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ದೂರಿದರು. ಈ ವಿಚಾರದಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಸ್ಪೀಕರ್ ತಕ್ಷಣವೇ ಕೋಲ್ಕತ್ತಾ ಪೊಲೀಸ್‌ನ ಉಪ ಆಯುಕ್ತರನ್ನು (ಕೇಂದ್ರ ವಿಭಾಗ) ಕರೆದರು ಮತ್ತು ಮೂವರು ತೃಣಮೂಲ ಕಾಂಗ್ರೆಸ್ ಶಾಸಕರು ಈ ಬಗ್ಗೆ ದೂರು ಪತ್ರವನ್ನು ಅವರಿಗೆ ನೀಡಿದರು. ಈ ದೂರಿನ ಆಧಾರದ ಮೇಲೆ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು