News Karnataka Kannada
Monday, April 29 2024
ಕ್ರೈಮ್

ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​

FIR against NV Green Biotech owner
Photo Credit : News Kannada

ಬೆಂಗಳೂರು: ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ್​ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಶ್ವತ್ಥ್​ ಹೆಗ್ಡೆ ವಿರುದ್ಧ ದೂರು ನೀಡಿದ್ದ ಉದ್ಯಮಿ ನೀಲಿಮಾ ಎಂಬವರು ದೂರು ನೀಡಿದ್ದರು.

ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ್​ ಹೆಗ್ಡೆ, ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ ಕೊಡುವುದಾಗಿ ಹೇಳಿದ್ದರು ಎಂಬುದಾಗಿ ನೀಲಿಮಾ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು