ಮುಂಬೈ: ಗೋರೆಗಾಂವ್ನ ಕಟ್ಟಡವೊಂದರಲ್ಲಿ ಇಂದು(ಅ.06) ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೃತಪಟ್ಟ ಆರು ಮಂದಿಯಲ್ಲಿ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ.
ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.