ನವದೆಹಲಿ: ಉತ್ತರಪ್ರದೇಶದ ಇಟಾವದಲ್ಲಿ ಸಂಚರಿಸುತ್ತಿದ್ದ ಹೊಸದಿಲ್ಲಿ-ದರ್ಬಂಗಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (02570) ಕೋಚ್ ಒಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಸರಾಯ್ ಭೂಪತ್ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಹಲವಾರು ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ರೈಲಿನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರಿದ್ದರು ಎಂದು ಮೂಲಗಳು ಹೇಳಿವೆ. ಸ್ಲೀಪರ್ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಸ್ಟೇಷನ್ ಮಾಸ್ಟರ್ ಗಮನಿಸಿದ್ದು, ನಂತರ ಈ ಬಗ್ಗೆ ರೈಲು ಚಾಲಕ ಮತ್ತು ಸಿಬ್ಬಂದಿಗೆ ಮಾಹಿತಿ ನೀಡಿ ರೈಲನ್ನು ನಿಲ್ಲಿಸಿದರು. ಬಳಿಕ ಸ್ಲೀಪರ್ ಕೋಚ್ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರೆತರಲಾಗಿದೆ ಎಂಬ ಮಾಹಿತಿ ದೊರೆತಿದೆ.
ಹೊಸದಿಲ್ಲಿ-ದರ್ಬಂಗಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಅನಾಹುತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.