News Karnataka Kannada
Tuesday, May 07 2024
ಕ್ರೈಮ್

ಮಾಜಿ ಶಾಸಕ ಕೆ. ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಪ್ರಕರಣ: ಆರೋಪಿಗೆ 1 ವರ್ಷ ಜೈಲುಶಿಕ್ಷೆ

Former MLA K. Raghupati Bhat's wife's suicide case: Accused sentenced to 1 year in jail
Photo Credit : News Kannada

ಉಡುಪಿ: 2008 ಜೂನ್ 10ರಂದು ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್ ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ಮಾಡಿದ್ದರೆಂದು ದೂರಲಾಗಿತ್ತು.

ಕಾರನ್ನು ಅಲ್ಲೇ ಬಿಟ್ಟು ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದು ಹೋಗಿದ್ದನು, ಕುಮಟಾಕ್ಕೆ ಬೆಂಗಳೂರಿನ ಚಾಲಕನೋರ್ವನನ್ನು ಕರೆಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದನು. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ರಾವ್ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದನು, ಅತುಲ್ ತನ್ನ ಪತ್ನಿ ಮೀರಾ ಡ್ರೈವಿಂಗ್ ಲೈಸೆನ್‌ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನು.

ಈ ಘಟನೆ ನಡೆಯುವ ಮೊದಲು ದೆಹಲಿಗೆ ಹೋಗಿದ್ದ ಅತುಲ್ ರಾವ್ ಅಲ್ಲಿ ಮನೆ ಬಾಡಿಗೆ ಪಡೆದು ಕೊಂಡಿದ್ದನು. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರಕ್ಕೆ ನೀಡಿದ್ದನು. ಇದು ಅಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿಯಾಗಿತ್ತು. ಆ ಬಾರಿಗೆ ಕರಾರು ಪತ್ರದಿಂದಲೇ ಅತುಲ್ ಧಾವ್ ಅಲ್ಲಿ ಬ್ಯಾಂಕ್ ಖಾತೆ ತೆರೆದಿದ್ದನು. ಅತುಲ್ ರಾವ್ ಎಸ್‌ಎಸ್‌ಎಲ್ಸಿ ಹೊಂದಿದ್ದರೂ ಪಿಡಬ್ಲ್ಯು ಇಲಾಖೆಯಲ್ಲಿ ಕ್ಲರ್ಕ್‌ ಆಗಿದ್ದರೂ ಅಲ್ಲಿ ತನ್ನ ವಿದ್ಯಾರ್ಹತೆಯನ್ನು ಬಿಇ ಮತ್ತು ಇಂಟಲ್ ಕಂಬಿನಿಯಲ್ಲಿ ಇಂಜಿನಿಯರ್ ಎಂಬುದು ಉಲ್ಲೇಖ ಮಾಡಿದ್ದನು ಎಂದು ದೂರಲಾಗಿದೆ.

ದೆಹಲಿಯಲ್ಲಿ ಬಾಡಿಗೆ ರೂಮಿಗೆ ಓಡಾಟ ನಡೆಸುತ್ತಿದ್ದಾಗ ಲಾಡ್ಜ್‌ನಲ್ಲಿಯೂ ಬೆಂಗಳೂರಿನ ನಕಲಿ ವಿಳಾಸವನ್ನು ನೀಡುತ್ತಿದ್ದನು. ಜೂ.10ರಂದು ದೆಹಲಿ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಒಂದು ಲಾಡ್ಜ್ ಮಾಡಿದ್ದನು ಅಲ್ಲಿಂದ ಜೂ.12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್‌ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದನು ಎಂದು
ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ರಘುಪತಿ ಭಟ್‌ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾರಂಭಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್‌ ಕೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

ಇದರಲ್ಲಿ ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 468ಕಾಯಿದೆಯಡಿ ಒಂದು ವರ್ಷ ಜೈಲುಶಿಕ್ಷೆ ಮತ್ತು 5000ರೂ. ದಂಡ, ಐಪಿಸಿ 417, 465, 471 ಕಾಯಿದೆಯಡಿ ತಲಾ ಆರು ತಿಂಗಳು ಸಜೆ ಹಾಗೂ 5000ರೂ. ದಂಡ ವಿಧಿಸಿ ಆದೇಶ ನೀಡಿದರು. ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು