ಸೊಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಘೋರ ಅನಾಹುತವೊಂದು ನಡೆದುಹೋಗಿದೆ. ಶಿರಡಿಗೆ ತೆರಳುತ್ತಿದ್ದ ಗುಲ್ಬರ್ಗ ಮೂಲದ ಯಾತ್ರಾರ್ಥಿಗಳಿದ್ದ ಎಸ್ಯುವಿ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಕರ್ಮಲಾ-ಅಹಮದ್ನಗರ ರಸ್ತೆಯಲ್ಲಿ ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ಚಾಲಕ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದು ನಿಯಂತ್ರಣ ತಪ್ಪಿ ಬೆಳಗ್ಗೆ 6 ಗಂಟೆ ಸುಮಾರಿಗೆ ಎದುರಿಗೆ ಬಂದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಕ್ಕದ ಕಂದಕ್ಕೆ ಉರುಳಿಬಿದ್ದಿದ್ದು ಅಪಘಾತ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎಸ್ಯುವಿ ಕಾರು ವೇಗವಾಗಿ ಬಂದು ಎದುರಿಗೆ ಬರುತ್ತಿದ್ದ ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿಬಿದ್ದಿತ್ತು. ಕಾರಿನಲ್ಲಿ ಗಾಯಗೊಂಡಿದ್ದರ ಕಿರುಚಾಟವನ್ನು ಕೇಳಿದ ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಗಾಯಾಗಳುಗಳನ್ನು ರಕ್ಷಿಸಿದರು.