News Karnataka Kannada
Sunday, May 19 2024
ಕ್ರೈಮ್

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : NewsKarnataka

ರಾಂಚಿ: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಜಾರ್ಖಂಡ್  ಪೊಲೀಸರು ವಶಕ್ಕೆ ಪಡೆದಿದ್ದಾರೆ.

15-17 ವರ್ಷ ವಯಸ್ಸಿನ ಅಪ್ರಾಪ್ತರು 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವೀಡಿಯೋ ಮಾಡಿದ್ದಾರೆ. ಈ ವಿಚಾರ ಬಹಿರಂಗಪಡಿಸಿದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಯುವತಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏ.21 ರಂದು ನಾಲ್ವರು ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಿದ್ದಲು ಡಂಪಿಂಗ್ ಯಾರ್ಡ್ ಬಳಿ ಯುವತಿಯನ್ನು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೇ 3 ರಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಈ ಸಂಬಂಧ ಯುವತಿ ದೂರು ನೀಡಿದ ಬಳಿಕ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು