ಸುಳ್ಯ: ಗುತ್ತಿಗಾರು ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಗುತ್ತಿಗಾರು: ಅಡಿಕೆ ರಾಶಿ ಮಧ್ಯೆ ಅರೆಬೆಂದ ಮೃತದೇಹ ಪತ್ತೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.