News Karnataka Kannada
Saturday, April 27 2024
ಕ್ರೈಮ್

ಉಡುಪಿಗೂ ಲಗ್ಗೆ ಇಟ್ಟಿದೆಯೇ ಖತರ್ನಾಕ್ ಚಡ್ಡಿ ಗ್ಯಾಂಗ್?

Has the Khatarnak shorts gang entered Udupi?
Photo Credit : News Kannada

ಉಡುಪಿ: ಉತ್ತರ ಭಾರತದ ಖತರ್ನಾಕ್ ಕಳ್ಳರ ಗ್ಯಾಂಗ್‌ ಹೋಲುವ ತಂಡವೊಂದು ಉಡುಪಿಯಲ್ಲಿ ಕೈಚಳಕ ಮಾಡುತ್ತಿರುವ ಬಗ್ಗೆ ಅನುಮಾನ ಮೂಡಿದೆ.

ಉಡುಪಿಯ ಸಂತಕಟ್ಟೆಯ ನವಮಿ ಬೇಕರಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವೊಂದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳ್ಳರು ಕೇವಲ ಚಡ್ಡಿಯನ್ನು ಹಾಕಿಕೊಂಡು, ಮೈ ತುಂಬಾ ಎಣ್ಣೆ ಹಚ್ಚಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಚ್ಚಾ ಬನಿಯನ್‌ ಗ್ಯಾಂಗ್ ಅಲಿಯಾಸ್ ಚಡ್ಡಿ ಗ್ಯಾಂಗ್ ಉತ್ತರ ಭಾರತದಲ್ಲಿ ವಿಲಕ್ಷಣ ಮಾದರಿಯಲ್ಲಿ ಕಳ್ಳತನ ನಡೆಸುತ್ತಿತ್ತು. ಸೊಂಟಕ್ಕೆ ಎರಡು ಚಪ್ಪಲಿಯನ್ನು ಸಿಕ್ಕಿಸಿಕೊಂಡು ಕಸುಬಿಗೆ ಇಳಿಯುವ ಈ ತಂಡ, ಕೃತ್ಯ ನಡೆಸಿದ ಸ್ಥಳದಲ್ಲಿ ಒಂದು ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು.

ಉಡುಪಿಯಲ್ಲಿ ಕಂಡುಬಂದ ಈ ತಂಡವೂ ಇಂಥದ್ದಲ್ಲೆವನ್ನೂ ಮಾಡುತ್ತಿದೆ. ಮನೆಮಂದಿ ನಿದ್ದೆಯಲ್ಲಿರುವಾಗ ಬಾಗಿಲನ್ನು ಒಡೆದು ಒಳಪ್ರವೇಶಿಸಿದ ಕಳ್ಳರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ.

ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು