ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿ ಮಂಗಳವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ 20 ವರ್ಷದ ಯುವತಿ ಅಫ್ರೀನ್ ನ ತಂದೆ ಮತ್ತು ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಅಫ್ರೀನ್ ಸಾವಿನ ಹಿಂದಿನ ಕಾರಣದ ಬಗ್ಗೆ ಹೈದರ್ ಮತ್ತು ಅವರ ತಂದೆ ನಿಯಾಮತುಲ್ಲಾ ನೀಡಿದ ಹೇಳಿಕೆಗಳಲ್ಲಿ ವಿರೋಧಾಭಾಸಗಳನ್ನು ಕಂಡುಕೊಂಡ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಫ್ರೀನ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಇಬ್ಬರೂ ಹೇಳಿಕೊಂಡಿದ್ದರು. ಆದಾಗ್ಯೂ, ಆಫ್ರೀನ್ ಅವರ ದೇಹದ ಮರಣೋತ್ತರ ಪರೀಕ್ಷೆಯಲ್ಲಿ ಹರಿತವಾದ ಆಯುಧದಿಂದ ಉಂಟಾದ ಗಾಯಗಳಿಂದ ಅವಳು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಹಿಂದೂ ಯುವಕನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಹೈದರ್ ಮತ್ತು ನಿಯಾಮತುಲ್ಲಾ ಭಾನುವಾರ ತಮ್ಮ ಮನೆಯ ಹೊರಗೆ ಸಾರ್ವಜನಿಕವಾಗಿ ಆಫ್ರೀನ್ ನನ್ನು ಥಳಿಸಿದ ಕೆಲವೇ ಗಂಟೆಗಳ ನಂತರ ಆಫ್ರೀನ್ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸೋಮವಾರ ಬೆಳಿಗ್ಗೆ ಅವಳನ್ನು ಸಮಾಧಿ ಮಾಡಲಾಗಿತ್ತು.
ಅಮೇಥಿ ಪೊಲೀಸರು ಹೈದರ್ ಮತ್ತು ಅವರ ತಂದೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅವರ ಮನೆಯ ಹೊರಗೆ ಆಕೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಘಟನೆಯು ಮರ್ಯದಾ ಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.