ಮೂಡಿಗೆರೆ: ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ನಡೆದಿದೆ. ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ (43) ಎಂಬ ದುರ್ದೈವಿ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದುಬಂದಿದೆ.